alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಜೆ ಸಿಎಂ ಯಡಿಯೂರಪ್ಪ ರಾಜೀನಾಮೆ…?

ವಿಧಾನಸಭೆ ಕಲಾಪ 3.30ಕ್ಕೆ ಮುಂದೂಡಲ್ಪಟ್ಟಿದೆ. ಸಂಜೆ 4 ಗಂಟೆಗೆ ಯಡಿಯೂರಪ್ಪ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಬಿಜೆಪಿಗೆ ಬಹುಮತ ಸಿಗೋದು ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಯಾವ ಶಾಸಕರೂ ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಹಾಗಾಗಿ ವಿಧಾನಸಭೆಯಲ್ಲಿ ವಿಶ್ವಾಸಮತ ಗಳಿಸುವ ಸಾಧ್ಯತೆ ಕ್ಷೀಣಿಸುತ್ತಿದ್ದು ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗ್ತಿದೆ.

ಯಡಿಯೂರಪ್ಪ ಸಂಜೆ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಕಳುಹಿಸಲಿದ್ದಾರಂತೆ. ಮೂಲಗಳ ಪ್ರಕಾರ ರಾಜೀನಾಮೆಗೂ ಮುನ್ನ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ.

ಇದಕ್ಕಾಗಿ 13 ಪುಟಗಳ ಭಾಷಣ ಸಿದ್ಧಪಡಿಸಿದ್ದಾರಂತೆ. ಬಿಜೆಪಿ ಆಡಳಿತಕ್ಕೆ ಬಂದ್ರೆ ಮಾಡಲಿದ್ದ ಅಭಿವೃದ್ಧಿ ಬಗ್ಗೆ ಭಾಷಣದಲ್ಲಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಸುಮಾರು 1 ಗಂಟೆಗೂ ಹೆಚ್ಚು ಕಾಲ ಭಾಷಣ ಮಾಡುವ ಸಾಧ್ಯತೆಯಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...