alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸ್ಥಾನ ಕುರಿತು ಏನೇಳಿದ್ದಾರೆ ಕೆಪಿಸಿಸಿ ಅಧ್ಯಕ್ಷರು?

ಪುತ್ತೂರು: ಕಾಂಗ್ರೆಸ್-ಜೆಡಿಎಸ್ ರಾಜ್ಯ ಸಮ್ಮಿಶ್ರ ಸರಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ, ಮುಖ್ಯಮಂತ್ರಿ ಹುದ್ದೆ ಐದು ವರ್ಷ ಜೆಡಿಎಸ್ ಗೆ ನೀಡಿದ್ದೇವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ‘ಉತ್ತಮ ಸರಕಾರ ನೀಡಿದರೂ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿದರು. ಈ ಸೋಲನ್ನು ಒಪ್ಪಿಕೊಂಡಿದ್ದೇವೆ. ಇದರ ವಿಶ್ಲೇಷಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಹೊರತು ಬೇರಾವ ಅರ್ಥದಲ್ಲಿ ಅಲ್ಲ. ಈಗಿರುವ ಸಮ್ಮಿಶ್ರ ಸರಕಾರದ ಸಿಎಂ ಹುದ್ದೆಯಲ್ಲಿ ಯಾವುದೇ ಬದಲಾವಣೆಯ ಚಿಂತನೆಯೂ ಇಲ್ಲ. ಐದು ವರ್ಷ ಕುಮಾರಸ್ವಾಮಿಯೇ ಸಿಎಂ ಆಗಿರಲಿದ್ದಾರೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್, ಕಳೆದ ನಾಲ್ಕೂವರೆ ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಒಂದೇ ಒಂದು ಬಾರಿ ಯಡಿಯೂರಪ್ಪ ರಾಜ್ಯದ ಪರ ಮಾತನಾಡಿಲ್ಲ. ಈಗ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅಧಿಕಾರ ಸಿಗಬೇಕೆಂಬ ದುರಾಸೆಯಿಂದ ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದೆಲ್ಲವೂ 3 ದಿನ ಸಿಎಂ ಆಗಿ ನಿರಾಶರಾಗಿರುವ ಯಡಿಯೂರಪ್ಪ ಮತ್ತೆ ಅಧಿಕಾರ ಹಿಡಿಯುವ ಸಲುವಾಗಿ ನಡೆಸುತ್ತಿರುವ ಕುತಂತ್ರ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...