alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕುಮಾರಸ್ವಾಮಿ ನೀಡಿದ್ದಾರೆ ಶಾಕಿಂಗ್ ಹೇಳಿಕೆ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮಂತ್ರಿ ಸ್ಥಾನ ಸಿಗದವರು ಭಿನ್ನಮತೀಯ ಚಟುವಟಿಕೆ ಆರಂಭಿಸಿದ ಕಾರಣ ಸರ್ಕಾರದ ಭವಿಷ್ಯದ ಕುರಿತು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯರೇ ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಇನ್ನೂ ಒಂದು ವರ್ಷ ಕಾಲ ನನ್ನನ್ನು ಯಾರೂ ಟಚ್ ಮಾಡಲಾಗುವುದಿಲ್ಲ. ಲೋಕಸಭಾ ಚುನಾವಣೆಯವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.

ಕೆಲಸ ಮಾಡಬೇಕಾದರೆ ಸಾಕಷ್ಟು ಜನ ಕಾಲೆಳೆಯುವವರು ಇರುತ್ತಾರೆ. ಆದರೆ ಪ್ರಕೃತಿಯೂ ನನ್ನ ಪರವಾಗಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಹಾಗಾದರೆ ಲೋಕಸಭಾ ಚುನಾವಣೆಯ ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನ ಹೋಗಲಿದೆಯಾ ಎಂಬ ಅನುಮಾನ ಸ್ವತಃ ಕುಮಾರಸ್ವಾಮಿಯವರನ್ನು ಕಾಡುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...