alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ಜುಲೈ 2 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರುಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಒತ್ತಡಕ್ಕೆ ಮಣಿದಿರುವ ಹೈಕಮಾಂಡ್ ಜುಲೈ 2 ರಂದು ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ತೋರಿಸಿದೆ ಎಂದು ಹೇಳಲಾಗಿದೆ.

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳು ತೀವ್ರ ಒತ್ತಡ ಹೇರಿದ್ದು, ಹೀಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಾದರೆ ಬಜೆಟ್ ಮಂಡನೆ ಸಂದರ್ಭದಲ್ಲಿ ಇದು ಯಾವ ಪರಿಣಾಮ ಬೀರಬಹುದು ಎಂಬುದರ ಕುರಿತು ಮಾತುಕತೆ ನಡೆಸಲಿದ್ದು, ಆ ಬಳಿಕ ಸಾಧಕ-ಬಾಧಕಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಒಂದೊಮ್ಮೆ ಜುಲೈ 2 ರಂದು ಸಚಿವ ಸಂಪುಟ ವಿಸ್ತರಣೆ ಸಾಧ್ಯವಾಗದಿದ್ದರೆ ಜುಲೈ 12 ರಂದು ನಡೆಯಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...