alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಆ ಸುದ್ದಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂಬ ವದಂತಿಗಳ ಮಧ್ಯೆ ತಡವಾಗಿ ಬಹಿರಂಗಗೊಂಡಿರುವ ಮಾಹಿತಿಯೊಂದು ಸಮ್ಮಿಶ್ರ ಸರ್ಕಾರದಲ್ಲಿ ಕೆಲ ಹೊತ್ತು ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಮಧ್ಯೆ ಸದ್ದಿಲ್ಲದೆ ನಡೆದ ಈ ಬೆಳವಣಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನೂ ಬೆಚ್ಚಿ ಬೀಳಿಸಿತ್ತೆನ್ನಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಂಪುಟದಲ್ಲಿ ಸಚಿವರಾಗಿರುವ ಪ್ರಭಾವಿ ರಾಜಕಾರಣಿಯ ಪುತ್ರರೊಬ್ಬರು ಸಚಿವ ಸಂಪುಟ ಸಭೆಯಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರೆಂದು ಹೇಳಲಾಗಿದ್ದು, ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿಯವರನ್ನು ಮತ್ತಷ್ಟು ಕಂಗಾಲಾಗುವಂತೆ ಮಾಡಿತ್ತೆನ್ನಲಾಗಿದೆ.

ತಕ್ಷಣವೇ ಮಧ್ಯ ಪ್ರವೇಶಿಸಿದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಅಸಮಾಧಾನಗೊಂಡು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ ಸಚಿವರನ್ನು ಸಮಾಧಾನಪಡಿಸಿದರೆಂದು ತಿಳಿದು ಬಂದಿದೆ. ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಳಂಬ ಧೋರಣೆಗೆ ಬೇಸತ್ತು ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...