alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಪರೇಷನ್ ಕಮಲ’ ಭೀತಿ ಹಿನ್ನಲೆ: ರಾಜ್ಯ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ಬಿಜೆಪಿ ಯತ್ನಿಸುತ್ತಿದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಸಚಿವ-ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳಲು ಯತ್ನಿಸುತ್ತಿರುವ ಉಭಯ ಪಕ್ಷಗಳ ನಾಯಕರು, ರಾಜ್ಯ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ ಮಾಡಲು ಮುಂದಾಗಿದ್ದಾರೆಂದು ಹೇಳಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭಿನ್ನಮತ ಭುಗಿಲೆದ್ದಿತ್ತಾದರೂ ಬೆಳಗಾವಿ ರಾಜಕಾರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಮೂಗು ತೂರಿಸಿದ ಬಳಿಕ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದ್ದು, ಇದನ್ನೇ ಬಿಜೆಪಿ ನಾಯಕರು ಎನ್ ಕ್ಯಾಶ್ ಮಾಡಿಕೊಳ್ಳಲು ಹೊರಟಿರುವ ಕಾರಣ ಈ ಬೆಳವಣಿಗೆಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು, ಹಾಲಿ ಸಚಿವ ಸಂಪುಟದಲ್ಲಿ ಕೆಲ ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ಹೀಗಾಗಿ ಕೆಲ ಸಚಿವರಿಗೆ ನೀಡಲಾಗಿರುವ ಎರಡು ಮೂರು ಖಾತೆಗಳನ್ನು ವಿಂಗಡಿಸುವುದು, ಕೆಲ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾಯಿಸುವುದು ಹಾಗೂ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕಾತಿಯನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಸೆಪ್ಟಂಬರ್ 23 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಆಗಮಿಸಲಿದ್ದು, ಆ ಸಂದರ್ಭದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...