alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಪ್ರಧಾನಿಯಾಗುವುದು ಖಚಿತ…! ಹೀಗೆ ಹೇಳಿದವರು ಯಾರು ಗೊತ್ತಾ…?

ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿವೆ. ಲೋಕಸಭಾ ಚುನಾವಣೆ ಜೊತೆಗೆ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಯೂ ನಡೆಯುತ್ತಿದ್ದು, ಅಧಿಕಾರದ ಗದ್ದುಗೆಗೇರಲು ಎರಡೂ ಪಕ್ಷಗಳು ಹಣಾಹಣಿ ನಡೆಸುತ್ತಿವೆ.

ಇದರ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೇರಲು ಬಿಜೆಪಿ ಸತತ ಪ್ರಯತ್ನ ನಡೆಸಿದೆ. ಇದನ್ನು ಉಳಿಸಿಕೊಳ್ಳುವ ಗುರುತರ ಜವಾಬ್ದಾರಿಯೂ ಪಕ್ಷದ ವರಿಷ್ಠರ ಮೇಲಿದೆ.

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, 2019 ರ ಲೋಕಸಭಾ ಚುನಾವಣೆ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಪ್ರಧಾನಿಯಾಗುವುದು ಖಚಿತ ಎಂದಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಬಹುಮತ ಬಾರದ ಕಾರಣ ಹೈಕಮಾಂಡ್ ಸೂಚನೆಯಂತೆ ಜೆಡಿಎಸ್ ಜೊತೆ ಸೇರಿಕೊಂಡು ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳುಗಳನ್ನೆ ಹೇಳಿಕೊಂಡು ಕಾಲ ಹರಣ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲವೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...