alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದ ಭವಿಷ್ಯ ಕುರಿತು ಹೊಸ ಬಾಂಬ್ ಸಿಡಿಸಿದ ಸದಾನಂದಗೌಡ

ಮಂಗಳೂರು: ಮುಂದಿನ 15ರಿಂದ ಒಂದು ತಿಂಗಳೊಳಗೆ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗುವಾಗಲೇ ಯಾವುದೇ ಒಂದು ಒಳ್ಳೆಯ ಉದ್ದೇಶಕ್ಕಾಗಿ ರಚನೆಯಾದದ್ದಲ್ಲ. ರಾಜ್ಯದ ಹಿತದೃಷ್ಟಿಯಿಂದ ಅಥವಾ ಪ್ರಜಾತಂತ್ರ ಎತ್ತಿ ಹಿಡಿಯಲು ರಚನೆಯಾಗಿಲ್ಲ. ಅಧಿಕಾರದ ಆಸೆಗಾಗಿ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸುವ ನಿಟ್ಟಿನಲ್ಲಿ ಸ್ವಾರ್ಥ ಸಾಧನೆಗಾಗಿ ಕಾಂಗ್ರೆಸ್-ಜೆಡಿಎಸ್ ನಾಯಕರಿಂದ ರಚನೆಯಾದ ಸಮ್ಮಿಶ್ರ ಸರ್ಕಾರವಿದು. ಸಿದ್ದರಾಮಯ್ಯ-ಕುಮಾರಸ್ವಾಮಿ ಹಾಗೂ ಹೆಚ್.ಡಿ. ದೇವೇಗೌಡರು ಒಟ್ಟಾಗಲು ಯಾವುದೇ ಸಂದರ್ಭದಲ್ಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರು ಅಂದು ಹೈಕಮಾಂಡ್ ಒತ್ತಾಯಕ್ಕೆ ಮಣಿದು, ಒಲ್ಲದ ಮನಸ್ಸಿನಿಂದ ಸಮ್ಮಿಶ್ರ ಸರ್ಕಾರ ರಚನೆಗೆ ಸಮ್ಮತಿ ನೀಡಿದರು. ಅವರು ಅಂದೇ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವ ಬಗ್ಗೆ ಚಿಂತನೆ ನಡೆಸಿದ್ದರು. ಅದು ಈಗ ಸತ್ಯವಾಗುತ್ತಿದೆ. ಹಾಗಾಗಿ ಇನ್ನು 15 ರಿಂದ ಒಂದು ತಿಂಗಳ ಒಳಗಾಗಿ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುವುದು ನಿಶ್ಚಿತ. ಪಕ್ಷದವರೇ ಮಾಡುತ್ತಿರುವ ತಂತ್ರಗಾರಿಕೆಗೆ ಒಳಗಾಗಿ ಪತನವಾಗುತ್ತಿರುವ ಸರ್ಕಾರಕ್ಕೆ ಬಿಜೆಪಿಯನ್ನು ದೂಷಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...