alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಕೊಠಡಿಯಲ್ಲಿದ್ದ ಹಾವು ಕಂಡು ಬೆಚ್ಚಿಬಿದ್ದ ವಿದ್ಯಾರ್ಥಿಗಳು

ಶಾಲಾ ಕೊಠಡಿಯಲ್ಲಿದ್ದ ಹಾವು ಕಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೆಚ್ಚಿ ಬಿದ್ದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರದಂದು ಎಂದಿನಂತೆ ಶಾಲಾ ಕೊಠಡಿ ಪ್ರವೇಶಿಸಿದ ವಿದ್ಯಾರ್ಥಿಗಳು ಅಲ್ಲಿದ್ದ ಹಾವನ್ನು ಕಂಡು ಗಾಬರಿಗೊಳಗಾಗಿದ್ದಾರೆ. ಅಲ್ಲಿಂದ ಪೇರಿಕಿತ್ತ ವಿದ್ಯಾರ್ಥಿಗಳು ಕೂಡಲೇ ಈ ವಿಚಾರವನ್ನು ಶಿಕ್ಷಕರ ಗಮನಕ್ಕೆ ತಂದಿದ್ದಾರೆ.

ಇದರಿಂದ ಆತಂಕಕ್ಕೊಳಗಾದ ಶಿಕ್ಷಕರು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕಳುಹಿಸಿ ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...