alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ವಿರುದ್ದ ಮತ್ತೊಮ್ಮೆ ಪರೋಕ್ಷ ಸಮರ ಸಾರಿದರಾ ಸಿಎಂ?

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಪರೋಕ್ಷ ಸಮರ ಸಾರಿದ್ದಾರೆಯೇ… ಇಂತದ್ದೊಂದು ಅನುಮಾನ ರಾಜಕೀಯ ವಲಯದಲ್ಲಿ ಕಂಡುಬರುತ್ತಿದೆ. ಕಾರಣ ಸಿಎಂ ಕುಮಾರಸ್ವಾಮಿ ‘ಕೈ’ ಸರ್ಕಾರದ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದೇ ಕೊಕ್ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಮಾಜಿ ಹಾಗೂ ಹಾಲೀ ಸಿಎಂ ನಡುವಿನ ಒಳ ಜಗಳದಲ್ಲಿ ಬೆಂಗಳೂರು ಅಭಿವೃದ್ದಿಯಲ್ಲಿ ಬಡವಾಗುತ್ತಿದೆ. ಸಿಎಂ ಅವರ ಈ ವರ್ತನೆ ಹಲವರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಸಿದ್ದರಾಮಯ್ಯ ತಮ್ಮ ಆಡಳಿತಾವಧಿಯಲ್ಲಿ ಘೋಷಿಸಿದ್ದ ಬೆಂಗಳೂರು ಅಭಿವೃದ್ಧಿ ಕುರಿತ ಹಲವಾರು ಯೋಜನೆಗಳಿಗೆ ಸಿಎಂ ಕುಮಾರಸ್ವಾಮಿ ಅನುದಾನ ಬಿಡುಗಡೆ ಮಾಡಿಲ್ಲ. ಇನ್ನು ಕೆಲ ಕಾಮಗಾರಿಗಳಿಗೂ ಕೊಕ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದ ಬಳಿಕ ಈ ಹಿಂದೆ ಖುದ್ದು ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ನಗರೋತ್ಥಾನ ಯೋಜನೆಗಳ ಅಡಿಯಲ್ಲಿ ಅನುದಾನವಿಲ್ಲದೇ ಕೆಲ ಯೋಜನೆಗಳನ್ನು ಕೈಬಿಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಚುನಾವಣಾ ವರ್ಷದಲ್ಲಿ 7500 ಕೋಟಿ ರೂ. ಭರಪೂರ ಹಣ ಬಿಡುಗಡೆ ಮಾಡಿತ್ತು. ಈ ನಿಟ್ಟಿನಲ್ಲಿ ಬಿಬಿಎಂಪಿ ರಸ್ತೆ ನಿರ್ಮಾಣ, ವಾರ್ಡ್ ಮಟ್ಟದ ಕಾಮಗಾರಿಗಳನ್ನು ಶುರುಮಾಡಿತ್ತು. ಆದರೀಗ ಕಾಮಗಾರಿ ಆರಂಭಿಸಿದ್ದ ಅಧಿಕಾರಿಗಳಿಗೇ ಶಾಕ್ ಆಗಿದ್ದು, ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಗಿದೆ. ಕಾರಣ ಉಳಿದ ಹಣ ಸರ್ಕಾರದಿಂದ ಬಿಡುಗಡೆಯಾಗುತ್ತಿಲ್ಲ. ಸಿಎಂ ಮಾತ್ರ ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದಾಗಿ ಹೇಳಿ ಬೆಂಗಳೂರು ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದು, ಸಿಎಂ ಅವರ ಈ ನಡೆಯಿಂದ ಬೆಂಗಳೂರು ಅಭಿವೃದ್ಧಿ ಹೇಗೆ ಸಾಧ್ಯ ಎಂಬುದು ಹಲವು ಕಾರ್ಪೋರೇಟರ್ ಗಳ ಪ್ರಶ್ನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...