alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಪಲ್ಟಿ: ನಾಲ್ವರು ವಿದ್ಯಾರ್ಥಿನಿಯರಿಗೆ ಗಾಯ

accident-55667ಚಾಲಕನ ನಿಯಂತ್ರಣ ತಪ್ಪಿದ ಕಾಲೇಜ್ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ನರ್ಸಿಂಗ್ ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಗುಜರಾತ್ ನಿಂದ ಬೆಂಗಳೂರಿಗೆ ಆಗಮಿಸಿದ್ದು, ಬೆಳಿಗ್ಗೆ 5 ಗಂಟೆ ಸುಮಾರಿಗೆ ಯಶವಂತಪುರದಿಂದ ಕಾಮಾಕ್ಷಿ ಪಾಳ್ಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.

ಬಸ್ ನಲ್ಲಿ 55 ಮಂದಿ ವಿದ್ಯಾರ್ಥಿಗಳಿದ್ದರೆಂದು ಹೇಳಲಾಗಿದ್ದು, ನಾಲ್ವರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲರೂ ವಾಣಿ ನರ್ಸಿಂಗ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...