alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ವೈಫೈ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸುವ ಯೋಜನೆ ಜಾರಿಗೆ ತಂದಿದೆ.

ಜ್ಞಾನ ಸಂಗಮ ಯೋಜನೆಯ ಅಡಿಯಲ್ಲಿ ಸರ್ಕಾರಿ ಕಾಲೇಜುಗಳ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗ್ತಿದೆ. ಮುಂದೆ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡಲು ಚಿಂತಿಸಲಾಗಿದೆ.

ಇದರೊಂದಿಗೆ ಪದವಿ ಕಾಲೇಜ್ ವಿದ್ಯಾರ್ಥಿಗಳ ಆನ್ ಲೈನ್ ಕಲಿಕೆಗೆ ಪೂರಕವಾಗಿ ಉಚಿತವಾಗಿ ವೈಫೈ ಸಂಪರ್ಕವನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ.

ಈಗಾಗಲೇ ರಾಜ್ಯದ ಅನೇಕ ಕಾಲೇಜುಗಳಲ್ಲಿ ವೈಫೈ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಬಾಕಿ ಉಳಿದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿಯೂ ವೈಫೈ ಸಂಪರ್ಕವನ್ನು ಕಲ್ಪಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಮಾಡಿಕೊಡಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...