alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲೇ ಕಂಡಕ್ಟರ್ ಆತ್ಮಹತ್ಯೆ

suicide-bus

ಕಲಬುರಗಿ: ಬಸ್ ನಲ್ಲಿಯೇ ನೇಣು ಬಿಗಿದುಕೊಂಡು, ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ನಡೆದಿದೆ.

ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಮೀನಾಕೇರಾ ಗ್ರಾಮದ 35 ವರ್ಷದ ಈರಣ್ಣ ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ರಾತ್ರಿ ಚಿಂಚೋಳಿಯಲ್ಲಿ ಬಸ್ ತಪಾಸಣೆ ನಡೆಸಿದ ನಿರೀಕ್ಷಕರು ದಂಡ ವಿಧಿಸಿದ್ದು, ಇದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಲ್ಲಿ ಇಬ್ಬರ ಬಳಿ ಟಿಕೆಟ್ ಇರಲಿಲ್ಲವಾದ್ದರಿಂದ ದಂಡ ವಿಧಿಸಲಾಗಿತ್ತು ಎನ್ನಲಾಗಿದೆ.

ನಿಲ್ದಾಣದಲ್ಲಿ ನಿಂತಿದ್ದ ಬಸ್ ನಲ್ಲಿಯೇ ಈರಣ್ಣ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಂಚೋಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...