alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ವಿರುದ್ಧ ಇಂದು ರಾಜ್ಯಪಾಲರಿಗೆ ಬಿಜೆಪಿ ದೂರು

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಪ್ರಹಸನ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಸಾರ್ವಜನಿಕರಿಗೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.

ಕುಮಾರಸ್ವಾಮಿಯವರು ಈ ಹೇಳಿಕೆ ನೀಡಿದ ಬಳಿಕವೇ ಕೆಲ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಧವಳಗಿರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಭಂಗ ತರುವಂತಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗಲು ಮುಂದಾಗಿದ್ದು, ಅದಕ್ಕೂ ಮುನ್ನ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಕುಮಾರಸ್ವಾಮಿಯವರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...