alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ಚುನಾವಣೆಯಲ್ಲೇ ಗೆಲುವಿನ ನಗೆ ಬೀರಿದ ಸೌಮ್ಯಾ ರೆಡ್ಡಿ

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ವಿರುದ್ಧ ಗೆಲುವು ಸಾಧಿಸಿದ್ದಾರೆ.

ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಚುನಾವಣೆ ಸೋಮವಾರದಂದು ನಡೆದಿತ್ತು.

ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜೆಡಿಎಸ್ ಅಭ್ಯರ್ಥಿ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರನ್ನು ಬೆಂಬಲಿಸಿ ಕಣದಿಂದ ಹಿಂದೆ ಸರಿದಿದ್ದರು. ಬಿಜೆಪಿ, ವಿಜಯಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ನೀಡಿತ್ತು. ಇನ್ನು ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಸೇರಿದಂತೆ ಒಟ್ಟು 19 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...