alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ..?

ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ಕೈಗೊಂಡಿರುವ ಕಾಂಗ್ರೆಸ್, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕೈಗೊಂಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಬಂದ ಬಳಿಕ, ಪಕ್ಷದ ಸಂಘಟನೆ, ಮುಂದಿನ ವಿಧಾನಸಭೆ ಚುನಾವಣೆ ಗೆಲುವಿಗೆ ಹಲವು ಸಲಹೆ ನೀಡಿದ್ದು, ಅದರಂತೆ ಸುಮಾರು 20 ಜಿಲ್ಲೆಗಳ ಅಧ್ಯಕ್ಷರ ಬದಲಾವಣೆಗೆ ಸೂಚಿಸಿದ್ದಾರೆ.

ಅವರ ಸೂಚನೆಯಂತೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಜಿಲ್ಲಾಧ್ಯಕ್ಷರ ಬದಲಾವಣೆಗೆ ಮುಂದಾಗಿದ್ದಾರೆ. ಅವರು ಹಿರಿಯ ಮುಖಂಡರೊಂದಿಗೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮುಖಂಡರೊಂದಿಗೆ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಿಲ್ಲ. ನೀವು ಮಧ್ಯಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಕೆಲವು ಮುಖಂಡರು ಮನವಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ನಡೆಸುವ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಒತ್ತಾಯಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...