alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ದೂರು

ನವದೆಹಲಿ: ಕರ್ನಾಟಕದಲ್ಲಿ ಬಹುಮತ ಹೊಂದಿರುವ ಜೆ.ಡಿ.ಎಸ್. -ಕಾಂಗ್ರೆಸ್ ಮೈತ್ರಿಕೂಟಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡದೇ ರಾಜ್ಯಪಾಲ ವಜೂಭಾಯ್ ವಾಲಾ ಪಕ್ಷಪಾತ ನಡೆ ಅನುಸರಿಸಿದ್ದಾರೆ ಎಂದು ದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಮೊದಲಾದ ನಾಯಕರು, ಚುನಾವಣೋತ್ತರ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿಕೂಟದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನ ನೀಡಬೇಕಿತ್ತು. ಆದರೆ, ರಾಜ್ಯಪಾಲರು ಕಾನೂನು ತಪ್ಪಿ ಪಕ್ಷಪಾತ ನಿಲುವು ತಳೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂದು ರಾತ್ರಿಯೇ ಸಿ.ಜೆ.ಐ. ಭೇಟಿ ಮಾಡಲಿರುವ ಕಾಂಗ್ರೆಸ್ ನಾಯಕರು, ರಾಜ್ಯಪಾಲರ ವಿರುದ್ಧ ದೂರು ನೀಡಲಿದ್ದು, ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...