alex Certify
ಕನ್ನಡ ದುನಿಯಾ       Mobile App
       

Kannada Duniya

ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್, ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದಿರುವ ಹಿನ್ನಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿರುವ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲ ವಜೂಭಾಯ್ ವಾಲಾರ ತೀರ್ಮಾನವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು ಶನಿವಾರ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಇದುವರೆಗೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳದ ಕಾಂಗ್ರೆಸ್, ನಾಳಿನ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯನ್ನು ಎದುರಿಸಲು ಸಮರ್ಥರೆಂಬ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತನ್ನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದೆ. ಹೈದರಾಬಾದ್ ನ ಕೃಷ್ಣಾ ತಾಜ್ ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್ ಶಾಸಕರ ಸಮ್ಮುಖದಲ್ಲಿ ಈ ಆಯ್ಕೆ ನಡೆದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...