alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಟಿಕೆಟ್ ವಂಚಿತರು

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎಲ್ಲ ಪ್ರಮುಖ ಪಕ್ಷಗಳಲ್ಲೂ ಆಕಾಂಕ್ಷಿಗಳ ಸಂಖ್ಯೆ ಜೋರಾಗಿದೆ. ಟಿಕೆಟ್ ಹಂಚಿಕೆಯೇ ನಾಯಕರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಅಂತಿಮ ದಿನಾಂಕ ಸಮೀಪಿಸುತ್ತಿದ್ದರೂ ಕೆಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆಲ ಅಭ್ಯರ್ಥಿಗಳು, ತಮಗೆ ಈ ಬಾರಿ ಸ್ಪರ್ಧಿಸಲು ಅವಕಾಶ ನಿರಾಕರಿಸಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಅಂತಿಮ ದಿನವಾಗಿದ್ದು, ಕಾಂಗ್ರೆಸ್ ಈವರೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಆದರೂ ತಮ್ಮ ಅಭ್ಯರ್ಥಿಗೆ ಟಿಕೆಟ್ ಕೈತಪ್ಪಿದೆ ಎಂಬ ಮಾಹಿತಿ ದೊರೆತ ಕೆಲವರು ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...