alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಆಗಲು ಈಗಲೇ ಶುರುವಾಯ್ತು ಪೈಪೋಟಿ

ವಿಜಯಪುರ: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಅಧಿಕಾರಕ್ಕೆ ಬರಲು ಪಕ್ಷದ ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಈಗಲೇ ಮುಖ್ಯಮಂತ್ರಿ ಹುದ್ದೆಗೇರಲು ಪೈಪೋಟಿ ಶುರುವಾಗಿದೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನಾಗಿ ನನ್ನನ್ನು ಆಯ್ಕೆ ಮಾಡಿದರೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಎದುರಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಏಕೆ ಆಗಬಾರದು. ಕಾಂಗ್ರೆಸ್ ಶಾಸಕಾಂಗ ಪಕ್ಷ, ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದು, ನನ್ನನ್ನು ಆಯ್ಕೆ ಮಾಡಿದರೆ ನಾನು ಸಿ.ಎಂ. ಆಗುತ್ತೇನೆ. ಸಿದ್ಧರಾಮಯ್ಯ ಅವರನ್ನು ಆಯ್ಕೆ ಮಾಡಿದರೆ, ಅದಕ್ಕೆ ನನ್ನ ಸಹಮತ ಇದೆ ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿ.ಎಂ. ಸಿದ್ಧರಾಮಯ್ಯ, ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರಲಿದ್ದು, ನಾನೇ ಮುಂದಿನ ಸಿ.ಎಂ. ಆಗುತ್ತೇನೆ. ಚುನಾವಣೆಯಲ್ಲಿ ರಿನಿವಲ್ ಮಾಡಿಕೊಂಡು ಬರುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...