alex Certify
ಕನ್ನಡ ದುನಿಯಾ       Mobile App
       

Kannada Duniya

ಕಡೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿ ಗೆಲುವು ಅಷ್ಟು ಸುಲಭವಲ್ಲವೆಂಬ ಕಾರಣಕ್ಕಾಗಿ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ಬಯಸಿದ್ದು, ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಕ್ಷಣದಲ್ಲಿ ಸಿದ್ದರಾಮಯ್ಯನವರಿಗೆ ಶಾಕ್ ನೀಡಿದೆ.

ಮುಖ್ಯಮಂತ್ರಿಯಾದವರು ಎರಡು ಕ್ಷೇತ್ರಗಳಿಂದ ಕಣಕ್ಕಿಳಿದರೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ ಎಂಬ ತೀರ್ಮಾನಕ್ಕೆ ಬಂದಿರುವ ಕಾಂಗ್ರೆಸ್ ಹೈಕಮಾಂಡ್, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಖಡಕ್ ಸೂಚನೆ ರವಾನಿಸಿರುವ ಕಾರಣ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆನ್ನಲಾಗಿದೆ.

ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯುವ ಸಲುವಾಗಿಯೇ ಬಿ.ಬಿ. ಚಿಮ್ಮನಕಟ್ಟಿಯವರಿಗೆ ಟಿಕೆಟ್ ತಪ್ಪಿಸಿ ತಮ್ಮ ಆಪ್ತನಿಗೆ ಟಿಕೆಟ್ ಕೊಡಿಸಿದ್ದ ಸಿದ್ದರಾಮಯ್ಯ, ಅಧಿಕೃತ ಅಭ್ಯರ್ಥಿಗೆ ಬಿ ಫಾರಂ ನೀಡದಂತೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದರೆನ್ನಲಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ತೀರ್ಮಾನದ ಮಾಹಿತಿ ತಿಳಿಯುತ್ತಿದ್ದಂತೆಯೇ ಗರಂ ಆಗಿರುವ ಹೈಕಮಾಂಡ್, ಯಾವುದೇ ಕಾರಣಕ್ಕೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯದಂತೆ ಸೂಚಿಸಿದೆ ಎನ್ನಲಾಗಿದೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದು, ಅವರೊಂದಿಗೆ ಮಾತುಕತೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಮೈಸೂರಿಗೆ ದೌಡಾಯಿಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...