alex Certify
ಕನ್ನಡ ದುನಿಯಾ       Mobile App
       

Kannada Duniya

ಭುಗಿಲೆದ್ದ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ

ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಆರಂಭವಾದ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದ್ದಿದ್ದು, ಈಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ಬಂದು ನಿಂತಿದೆ.

ಎರಡೂ ಬಣಗಳ ನಾಯಕರ ಅಸಮಾಧಾನವನ್ನು ಶಮನಗೊಳಿಸಲು ಮುಂದಾದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಸಮಸ್ಯೆಗಳನ್ನು ತೋಡಿಕೊಂಡಿದ್ದಾರೆ. ಅಲ್ಲದೇ ಒಬ್ಬರ ಮೇಲೊಬ್ಬರು ಆರೋಪಗಳನ್ನೂ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ 20 ವರ್ಷಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಮ್ಮ ಕುಟುಂಬ ಬೆಳೆಸಿದೆ. ಶಾಸಕರಾದ ಮೇಲೆ ಜಾತಿ ನೆಪ ಹೇಳಿ ಬ್ಯಾಂಕ್ ನಿರ್ದೇಶಕರಿಗೆ ಆಮಿಷವೊಡ್ಡಿ ಗುಂಪುಗಾರಿಕೆ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂಬುದು ಜಾರಕಿಹೊಳಿ ಸಹೋದರರ ಆರೋಪ.

ಜಾರಕಿಹೊಳಿ ಸಹೋದರರಿಂದ ರಾಜಕೀಯ ಕಿರುಕುಳ ಹೆಚ್ಚುತ್ತಿದೆ ಎಂಬುದು ಹೆಬ್ಬಾಳ್ಕರ್ ದೂರು. ಎರಡೂ ಬಣಗಳ ಅಸಮಾಧಾನ ಶಮನಗೊಳಿಸುವ ದಾರಿ ಕಾಣದೇ ವೇಣುಗೋಪಾಲ್ ಅವರು, ಬಹಿರಂಗ ಹೇಳಿಕೆಗಳನ್ನು ನೀಡದೇ ಒಗ್ಗಟ್ಟಿನಿಂದ ಹೋಗುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಬೆಳಗಾವಿ ಸಂಘರ್ಷ ಹೈಕಮಾಂಡ್ ಗೂ ತಲೆನೋವಾಗಿದ್ದು, ಇದು ಹೀಗೆಯೇ ಮುಂದುವರೆದರೆ ಪಕ್ಷದ ಸಂಘಟನೆಯಲ್ಲಿ ಸಮಸ್ಯೆ ಎದುರಾಗಲಿದೆ ಎಂಬುದು ಕಾಂಗ್ರೆಸ್ ಆತಂಕಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...