alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗಿಂದು ವೇಣುಗೋಪಾಲ್: ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಾಳೆ ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಇದರ ಬೆನ್ನಲ್ಲೇ ಸಚಿವ ಸ್ಥಾನಾಕಾಂಕ್ಷಿ ಶಾಸಕರ ಚಟುವಟಿಕೆ ಬಿರುಸುಗೊಂಡಿದೆ.

ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂದು ಕಾಂಗ್ರೆಸ್ ಶಾಸಕರುಗಳು ಆಗ್ರಹಿಸುತ್ತಿದ್ದು, ವೇಣುಗೋಪಾಲ್ ಹೈಕಮಾಂಡ್ ನಿಂದ ಯಾವ ಸಂದೇಶ ಹೊತ್ತು ತರುತ್ತಿದ್ದಾರೆಂಬುದು ಕುತೂಹಲ ಮೂಡಿಸಿದೆ.

ಒಂದು ವೇಳೆ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಸ್ಥಾನ ವಂಚಿತ ಶಾಸಕರುಗಳ ಅತೃಪ್ತಿ ಸ್ಫೋಟಗೊಳ್ಳಬಹುದು ಎಂಬ ಕಾರಣಕ್ಕೆ ನಿಗಮ ಮಂಡಳಿಗಳ ನೇಮಕಾತಿಯನ್ನೂ ಮಾಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರಿದ್ದು, ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...