alex Certify
ಕನ್ನಡ ದುನಿಯಾ       Mobile App
       

Kannada Duniya

ಭಿನ್ನಮತ ಶಮನಕ್ಕೆ ಅಖಾಡಕ್ಕಿಳಿದ ಕಾಂಗ್ರೆಸ್ ಹೈಕಮಾಂಡ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರುಗಳ ಅಸಮಾಧಾನ ಭುಗಿಲೆದ್ದಿದೆ. ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಹೈಕಮಾಂಡ್ ಎಚ್ಚರಿಸಿದರೂ ಲೆಕ್ಕಿಸದೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಇದರಿಂದ ಅನಿವಾರ್ಯವಾಗಿ ಭಿನ್ನಮತ ಶಮನಕ್ಕೆ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಅಖಾಡಕ್ಕಿಳಿಸಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿದ್ದ ವೇಣುಗೋಪಾಲ್ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

ವೇಣುಗೋಪಾಲ್ ಅವರ ಸಮಜಾಯಿಷಿಗೆ ಜಗ್ಗದ ಎಚ್.ಕೆ. ಪಾಟೀಲ್, ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆನ್ನಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...