alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ ಕ್ಷೇತ್ರದಲ್ಲಿ ಮೂರೂ ಪಕ್ಷದ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

ಶಿವಮೊಗ್ಗ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ. ಬೆಳಿಗ್ಗೆ ಮತ್ತು ಸಂಜೆ ಬಡಾವಣೆಗಳಿಗೆ ತೆರಳಿ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ.

ಇದರೊಂದಿಗೆ ವಾರ್ಡ್ ವಾರು ಸಭೆಗಳನ್ನು ನಡೆಸಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ಧಾರೆ. ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಪಕ್ಷದ ಗೆಲುವಿಗೆ ಕೈಗೊಳ್ಳಬೇಕಾದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಮೂರು ಪಕ್ಷಗಳ ಅಭ್ಯರ್ಥಿಗಳೊಂದಿಗೆ ಪಕ್ಷೇತರ ಅಭ್ಯರ್ಥಿಗಳು ಕೂಡ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರದೊಂದಿಗೆ ದೇವಾಲಯ, ಮಠ ಮಂದಿರಗಳ ಭೇಟಿ ಮುಂದುವರೆದಿದೆ.

ವಿವಿಧ ಕಾರಣಗಳಿಂದ ಪಕ್ಷದಿಂದ ದೂರವಾಗಿದ್ದವರನ್ನು ಮರಳಿ ಪಕ್ಷಕ್ಕೆ ಕರೆತರುವ ಪ್ರಕ್ರಿಯೆಗಳು ನಡೆದಿವೆ. ಇದರೊಂದಿಗೆ ಪಕ್ಷಾಂತರ ಪರ್ವವೂ ಜೋರಾಗಿದ್ದು, ಬೇಡಿಕೆ ಇರುವ ಮುಖಂಡರು ಅನ್ಯ ಪಕ್ಷಗಳತ್ತ ಹೆಜ್ಜೆ ಹಾಕುತ್ತಿದ್ಧಾರೆ. ಪ್ರಚಾರಕ್ಕೆ ಕೆಲವೇ ದಿನಗಳಷ್ಟೆ ಬಾಕಿ ಉಳಿದಿದ್ದು, ಎಲ್ಲರನ್ನು ಒಗ್ಗೂಡಿಸಿಕೊಂಡು ಅಭ್ಯರ್ಥಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಪ್ರಚಾರದಲ್ಲಿ ನಿರತರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...