alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರು ಕಾಂಗ್ರೆಸ್ ಶಾಸಕರ ಸೆಳೆಯಲು JDS –BJP ಪೈಪೋಟಿ..?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಈಗಾಗಲೇ ತಯಾರಿ ನಡೆಸಿವೆ.

ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಇತ್ತೀಚೆಗೆ ಹೇಳಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಹಜ. ಕಾಂಗ್ರೆಸ್ ಪಕ್ಷದ ಇಬ್ಬರು ಹಿರಿಯ ಶಾಸಕರು ಅನ್ಯ ಪಕ್ಷಗಳತ್ತ ಚಿತ್ತ ಹರಿಸಿದ್ದಾರೆ.

6 ಬಾರಿ ಚುನಾಯಿತರಾಗಿರುವ ಅಫ್ಜಲ್ ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್, 5 ಬಾರಿ ಜಯಗಳಿಸಿರುವ ಯಾದಗಿರಿ ಶಾಸಕ ಡಾ. ಮಾಲಕರೆಡ್ಡಿ ಅವರು ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

5 -6 ಸಲ ಶಾಸಕರಾಗಿದ್ದರೂ, ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದ ಇಬ್ಬರೂ ಚುನಾವಣೆ ವೇಳೆಗೆ ಪಕ್ಷ ತೊರೆಯಲಿದ್ದಾರೆ. ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಇಬ್ಬರೂ ಶಾಸಕರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಶಾಸಕರಿಬ್ಬರು ಜೆ.ಡಿ.ಎಸ್. ಸೇರಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಬಿ.ಜೆ.ಪಿ. ಕೂಡ ಈ ಶಾಸಕರನ್ನು ಸೆಳೆಯಲು ಮುಂದಾಗಿದೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮಾಲೀಕಯ್ಯ ಗುತ್ತೇದಾರ್ ಮತ್ತು ಮಾಲಿಕರೆಡ್ಡಿ ಅವರಿಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...