alex Certify
ಕನ್ನಡ ದುನಿಯಾ       Mobile App
       

Kannada Duniya

ಮಹೇಶ್ ರಾಜೀನಾಮೆಗೆ ಕಾರಣವಾಯ್ತಾ ದೋಸ್ತಿ ಸರ್ಕಾರದ ಸಚಿವರ ನಡುವಿನ ಮುಸುಕಿನ ಗುದ್ದಾಟ…?

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಸಂಘಟನೆಗೆ ಹಾಗೂ ತಮ್ಮ ವಿಧಾನಸಭಾ ಕ್ಷೇತ್ರವಾದ ಕೊಳ್ಳೇಗಾಲದ ಕಡೆ ಹೆಚ್ಚಿನ ಗಮನಹರಿಸಲು ತಾವು ರಾಜೀನಾಮೆ ನೀಡುತ್ತಿರುವುದಾಗಿ ಬಹುಜನ ಸಮಾಜ ಪಕ್ಷದ ಶಾಸಕ ಮಹೇಶ್ ಹೇಳಿರುವರಾದರೂ ರಾಜೀನಾಮೆ ಹಿಂದೆ ಹಲವು ಕಾರಣಗಳಿವೆ ಎಂದು ವಿಶ್ಲೇಷಿಸಲಾಗಿದೆ.

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಬಹುಜನ ಸಮಾಜ ಪಕ್ಷದ ಮೈತ್ರಿ ಮುರಿದು ಬಿದ್ದಿರುವುದು ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಯಿಂದ ಹೊರ ಬರುವ ಸೂಚನೆ ನೀಡಿರುವ ಕಾರಣ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಲ್ಲಿ ಮಹೇಶ್ ಸಚಿವರಾಗಿ ಮುಂದುವರಿಯುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ದೋಸ್ತಿ ಸರ್ಕಾರದ ಸಚಿವರುಗಳಿಂದಲೇ ಕೇಳಿ ಬಂದ ಕಾರಣ ಮಹೇಶ್ ಈ ನಿರ್ಧಾರ ಕೈಗೊಂಡಿದ್ದಾರೆನ್ನಲಾಗಿದೆ.

ಅದರಲ್ಲೂ ಸಚಿವ ಮಹೇಶ್, ದೋಸ್ತಿ ಸರ್ಕಾರದಲ್ಲಿದ್ದುಕೊಂಡೇ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದು, ಇದು ಮತ್ತೊಬ್ಬ ಸಚಿವ ಪುಟ್ಟರಂಗಶೆಟ್ಟಿಯವರನ್ನು ಕೆರಳಿಸಿತ್ತು. ಕಾಂಗ್ರೆಸ್ ಪಕ್ಷ ಮನಸ್ಸು ಮಾಡಿದರೆ ಮಹೇಶ್ ಒಂದು ಕ್ಷಣವೂ ಸಚಿವರಾಗಿ ಮುಂದುವರಿಯುವುದಿಲ್ಲವೆಂದು ಪುಟ್ಟರಂಗಶೆಟ್ಟಿ ಹೇಳಿದ್ದರು. ಈ ಎಲ್ಲ ಬೆಳವಣಿಗೆಗಳು ಮಹೇಶ್ ಅವರ ರಾಜೀನಾಮೆಗೆ ಕಾರಣವಾಗಿದೆ ಎನ್ನಲಾಗಿದ್ದು, ಇದು ದೋಸ್ತಿ ಸರ್ಕಾರದ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...