alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂನಲ್ಲಿ ಕೈಗೆ ಮುಖಭಂಗ : ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ

ಹಂಗಾಮಿ ಸ್ಪೀಕರ್ ಬೋಪಯ್ಯ ನೇಮಕಾತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ. ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಬೋಪಯ್ಯನವರೇ ಹಂಗಾಮಿ ಸ್ಪೀಕರ್ ಆಗಿ ಮುಂದುವರೆಯಲಿದ್ದಾರೆ.

ವಾದ ಹಾಗೂ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಕಾಂಗ್ರೆಸ್ ಅರ್ಜಿ ಪರಿಶೀಲನೆ ನಡೆಸಿದ ನಂತ್ರ ಸುಪ್ರೀಂ ತನ್ನ ಅಭಿಪ್ರಾಯ ಹೇಳ್ತು. ಒಂದು ವೇಳೆ ರಾಜ್ಯಪಾಲರ ಕ್ರಮವನ್ನು ಪ್ರಶ್ನೆ ಮಾಡಿದ್ರೆ ನಿನ್ನೆ ನೀಡಿದ ತೀರ್ಪಿಗೆ ವಿರುದ್ಧವಾಗುತ್ತದೆ. ಹಂಗಾಮಿ ಸ್ಪೀಕರ್ ಬೋಪಯ್ಯ ನೇಮಕವನ್ನು ರದ್ದುಗೊಳಿಸಿದರೆ ವಿಶ್ವಾಸಮತಯಾಚನೆ ವೇಳೆ ಯಾರು ಸ್ಪೀಕರ್ ಸ್ಥಾನದಲ್ಲಿರುತ್ತಾರೆ? ನಿಮ್ಮ ವಾದದಲ್ಲಿಯೇ ಸಾಕಷ್ಟು ಗೊಂದಲಗಳಿವೆ. ನೇಮಕ ರದ್ದುಗೊಳಿಸಿದ್ರೆ ವಿಶ್ವಾಸಮತಯಾಚನೆ ಇಂದು ನಡೆಯೋದಿಲ್ಲ ಎಂದ ಸುಪ್ರೀಂ ಕೋರ್ಟ್ ಅರ್ಜಿ ವಜಾ ಮಾಡಿದೆ.

ವಿಶ್ವಾಸಮತದ ವೇಳೆ ಏನೆಲ್ಲ ಕ್ರಮಕೈಗೊಳ್ಳಬೇಕೆಂಬ ಬಗ್ಗೆ ನಿನ್ನೆಯೇ ಸೂಚನೆ ನೀಡಲಾಗಿದೆ. ಅದ್ರಂತೆ ನಡೆದುಕೊಳ್ಳಬೇಕು ಎಂದು ಸುಪ್ರೀಂ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...