alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು ಬಜೆಟ್ ಕುರಿತು ‘ಕೈ’ ನಾಯಕರ ಅಸಮಾಧಾನ

ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿ ಹಲವು ದಿನಗಳೇ ಕಳೆದಿವೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿನ ಅಸಮಾಧಾನ ಈಗ ಬಯಲಿಗೆ ಬಂದಿದೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಜೆಟ್ ನ ಕೆಲ ಅಂಶಗಳ ಕುರಿತು ವಿರೋಧ ವ್ಯಕ್ತವಾಗಿದೆ.

ಬಜೆಟ್ ನಲ್ಲಿ ಪೆಟ್ರೋಲ್-ಡಿಸೇಲ್ ದರ ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸದೆ ಇರುವ ಬಗ್ಗೆ ಕೈ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ತೈಲ ಬೆಲೆ ಏರಿಕೆಗೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಸಮ್ಮಿಶ್ರ ಸರ್ಕಾರದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಸರ್ಕಾರಕ್ಕೆ ಪೆಟ್ರೋಲ್-ಡಿಸೇಲ್ ಮೇಲಿನ ಸೆಸ್ ನಿಂದ ಆದಾಯ ಬರುತ್ತದೆ. ಹಾಗಂತ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ. ಈ ಬಗ್ಗೆ ಸಿಎಂ ಗಮನ ಸೆಳೆಯಲು ಕಾಂಗ್ರೆಸ್ ನಾಯಕರು ತೀರ್ಮಾನ ಮಾಡಿದ್ದಾರೆ.

ಇನ್ನು ಅನ್ನಭಾಗ್ಯ ಯೋಜನೆಯಡಿ ಈ ಹಿಂದೆ ನೀಡುತ್ತಿದ್ದಂತೆ ಏಳು ಕೆಜಿ ಅಕ್ಕಿಯನ್ನು ಕೊಡಬೇಕು. ಎರಡು ಕೆಜಿ ಹೆಚ್ಚಿಗೆ ಮಾಡೋದ್ರಿಂದ ಸರ್ಕಾರಕ್ಕೆ ಅಷ್ಟೇನು ಹೊರೆಯಾಗೋದಿಲ್ಲ ಎಂದು ಅಭಿಪ್ರಾಯಪಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...