alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರಸ್ವಾಮಿಯವರ ಕಣ್ಣೀರಿನಿಂದಾಗಿ ರಾಷ್ಟ್ರ ಮಟ್ಟದಲ್ಲಿ ಮುಜುಗರಕ್ಕೊಳಗಾಯ್ತಾ ಕಾಂಗ್ರೆಸ್ ಹೈಕಮಾಂಡ್?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್, ಕಡಿಮೆ ಶಾಸಕರ ಸಂಖ್ಯಾಬಲ ಹೊಂದಿದ್ದರೂ ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟಿದೆ.

ಇದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರೂ ಅವರುಗಳ ಮನವೊಲಿಸಿದ ರಾಷ್ಟ್ರೀಯ ನಾಯಕರು, ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡವಳಿಕೆಗಳಿಂದಾಗಿ ಕೈ ಕೈ ಹಿಸುಕಿಕೊಳ್ಳುವಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆಂಬ ಏಕೈಕ ಕಾರಣಕ್ಕಾಗಿ ಜೆಡಿಎಸ್ ಗೆ ಬೆಂಬಲ ಸೂಚಿಸಿದ ಕಾಂಗ್ರೆಸ್ ನಾಯಕರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ಬಳಿಕ ಒಂದೊಂದೇ ಬೇಡಿಕೆಗಳನ್ನು ಮಂಡಿಸಲಾರಂಭಿಸಿದರು.

ಆರಂಭದಲ್ಲಿ ಇದಕ್ಕೆ ಮಣಿದ ಕುಮಾರಸ್ವಾಮಿಯವರು ಈಗ ಕಾಂಗ್ರೆಸ್ ನಾಯಕರ ಬೇಡಿಕೆಗಳಿಗೆ ಕ್ಯಾರೆ ಎನ್ನುತ್ತಿಲ್ಲ. ಜೊತೆಗೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಾರಿಗೆ ತಂದ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಲು ಉತ್ಸುಕತೆಯನ್ನೂ ತೋರುತ್ತಿಲ್ಲ.

ಇವರ ಮಧ್ಯೆ ಜೆಡಿಎಸ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಕುಮಾರಸ್ವಾಮಿಯವರು ವಿಷಕಂಠನಂತೆ ವಿಷ ನುಂಗುತ್ತಿದ್ದೇನೆ ಎಂದು ಹೇಳಿರುವುದು ರಾಜ್ಯ ಬಿಜೆಪಿ ಮಾತ್ರವಲ್ಲ ರಾಷ್ಟ್ರೀಯ ಬಿಜೆಪಿ ನಾಯಕರ ಟೀಕಾ ಪ್ರಹಾರಕ್ಕೂ ಗುರಿಯಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಕುಮಾರಸ್ವಾಮಿಯವರನ್ನು ಬೆಂಬಲಿಸಿದ್ದ ಹೈಕಮಾಂಡ್ ಮುಖಂಡರಿಗೆ ಇದು ಈಗ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಕುಮಾರಸ್ವಾಮಿಯವರ ಹೇಳಿಕೆಯಿಂದ ಪಕ್ಷಕ್ಕಾಗಿರುವ ಹಾನಿಯನ್ನು ತಡೆಗಟ್ಟುವ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಗಲಿಗೆ ಏರಿಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...