alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿಕೂಟದ ಸರ್ಕಾರಕ್ಕೆ ಎದುರಾಗಿದೆ ಮೊದಲ ಅಗ್ನಿಪರೀಕ್ಷೆ

ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ ಕಾರಣ ರಾಜ್ಯಪಾಲರ ಆಹ್ವಾನದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಶಾಸಕರ ಸಂಖ್ಯಾಬಲ ದೊರೆಯದ ಹಿನ್ನಲೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಅದಾದ ಬಳಿಕ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸರ್ಕಾರ ರಚಿಸಲು ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದ್ದ ರಾಜ್ಯಪಾಲ ವಜುಭಾಯ್ ವಾಲಾ, ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದರೂ ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸಿದ ಎರಡು ದಿನಗಳ ಬಳಿಕ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ಶುಕ್ರವಾರ ಕುಮಾರಸ್ವಾಮಿಯವರು ತಮ್ಮ ಸರ್ಕಾರದ ವಿಶ್ವಾಸಮತ ಯಾಚನೆ ಮಾಡಲಿದ್ದು, ಅದಕ್ಕೂ ಮುನ್ನ ವಿಧಾನಸಭಾ ಸ್ಪೀಕರ್ ಆಯ್ಕೆ ನಡೆಯಲಿದೆ. ಮೈತ್ರಿಕೂಟದ ಸಭಾಪತಿ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ರಮೇಶ್ ಕುಮಾರ್ ನಾಮಪತ್ರ ಸಲ್ಲಿಸಿದರೆ, ಬಿಜೆಪಿಯಿಂದ ಸುರೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ನಾಳೆ ವಿಧಾನಸಭಾ ಸಭಾಪತಿ ಚುನಾವಣೆ ನಡೆಯಲಿದ್ದು, ಬಹುತೇಕ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕಾಂಗ್ರೆಸ್ ನ ರಮೇಶ್ ಕುಮಾರ್ ಆಯ್ಕೆಯಾಗುವ ಸಾಧ್ಯತೆಗಳಿವೆ.

ಫಲಿತಾಂಶ ಪ್ರಕಟಗೊಂಡ ದಿನದಿಂದ ಹೋಟೆಲ್ ಹಾಗೂ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರವನ್ನು ಬೆಂಬಲಿಸುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು, ನಾಳಿನ ಅಗ್ನಿಪರೀಕ್ಷೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟದ ಸರ್ಕಾರ ಯಶಸ್ವಿಯಾಗುತ್ತದಾ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...