alex Certify
ಕನ್ನಡ ದುನಿಯಾ       Mobile App
       

Kannada Duniya

ಜಿದ್ದಾಜಿದ್ದಿನ ಕ್ಷೇತ್ರ ಹೊಳೆನರಸೀಪುರದಲ್ಲಿ ಘರ್ಷಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ ಬಾಗೂರು ಮಂಜೇಗೌಡರ ಸ್ಪರ್ಧೆಯಿಂದಾಗಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಹೊಳೆನರಸೀಪುರದಲ್ಲಿ ರಾತ್ರಿ ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯ ಎ.ಕಾಳೇನಹಳ್ಳಿಯಲ್ಲಿ ರಾತ್ರಿ ಪ್ರಚಾರದ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೇಯಸ್ ಪಟೇಲ್ ಅವರಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮತ್ತೊಂದು ಕಾರಿನ ಮೇಲೆಯೂ ಕಲ್ಲು ತೂರಲಾಗಿದ್ದು, ಕಾರಿನ ಗಾಜುಗಳಿಗೆ ಹಾನಿಯಾಗಿದೆ.

ಕಾಂಗ್ರೆಸ್ ಮುಖಂಡರು ಪ್ರಚಾರಕ್ಕೆ ಬಂದಿದ್ದ ವೇಳೆ, ಹೆಚ್.ಡಿ. ರೇವಣ್ಣರ ಪುತ್ರ ಸೂರಜ್ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇದನ್ನು ಪಕ್ಷದ ಕಾರ್ಯಕರ್ತರು ಅಲ್ಲಗಳೆದಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...