alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಾಗಲಿದ್ದಾರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ…?

78 ಸ್ಥಾನ ಗಳಿಸಿರುವ ಕಾಂಗ್ರೆಸ್, 38 ಸ್ಥಾನ ಗಳಿಸಿರುವ ಜೆ.ಡಿ.ಎಸ್. ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದು, ಪಕ್ಷದ ನಾಯಕರು ಈಗಾಗಲೇ ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬೆಂಗಳೂರಿನ ಹೋಟೆಲ್ ನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು, ಮೈತ್ರಿ ಸರ್ಕಾರ ರಚನೆಯ ಕುರಿತಾಗಿ ರೂಪುರೇಷೆ ಸಿದ್ಧಪಡಿಸಿದ್ದಾರೆ.

ಇಂದು ಬೆಳಿಗ್ಗೆ 8 ಗಂಟೆಗೆ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಶಾಸಕರಿಗೆ ಸಭೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಯಾವುದೇ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ತಿಳಿಸಲಾಗಿದೆ.

ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬೀ ಆಜಾದ್, ಸಿದ್ಧರಾಮಯ್ಯ, ಡಾ. ಜಿ ಪರಮೇಶ್ವರ್ ಮೊದಲಾದವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜೆ.ಡಿ.ಎಸ್.ನೊಂದಿಗೆ ಸರ್ಕಾರ ರಚನೆಗೆ ಒಪ್ಪಿಗೆ ಸೂಚಿಸಿ ಶಾಸಕರು ಸಹಿ ಮಾಡಲಿದ್ದಾರೆ. ಈ ಒಪ್ಪಿಗೆ ಪತ್ರವನ್ನು ರಾಜ್ಯಪಾಲರಿಗೆ ನೀಡಲಾಗುವುದು.

ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಿದ್ದು, ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...