alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಸರ್ಕಾರ: ಕಾಂಗ್ರೆಸ್ –ಜೆ.ಡಿ.ಎಸ್. ನಾಯಕರ ಪ್ರತ್ಯೇಕ ಸಭೆ

78 ಸ್ಥಾನ ಗಳಿಸಿರುವ ಕಾಂಗ್ರೆಸ್, 38 ಸ್ಥಾನ ಗಳಿಸಿರುವ ಜೆ.ಡಿ.ಎಸ್. ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದು, ಪಕ್ಷದ ನಾಯಕರು ಈಗಾಗಲೇ ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬೆಂಗಳೂರಿನ ಹೋಟೆಲ್ ನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು, ಮೈತ್ರಿ ಸರ್ಕಾರ ರಚನೆಯ ಕುರಿತಾಗಿ ರೂಪುರೇಷೆ ಸಿದ್ಧಪಡಿಸಿದ್ದಾರೆ.

ಜೆ.ಡಿ.ಎಸ್. ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಹಾಗೂ ಮಂತ್ರಿ ಮಂಡಲದ ಕುರಿತಾಗಿ ನಾಯಕರು ಸಮಾಲೋಚನೆ ನಡೆಸಿದ್ದು, ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡರ ಸಲಹೆ, ಸೂಚನೆ ಪಡೆಯಲಾಗಿದೆ.

ಎರಡೂ ಪಕ್ಷಗಳ ಶಾಸಕರ ಶಾಸಕಾಂಗ ಸಭೆ ನಡೆಸಲಿದ್ದು, ಇದರೊಂದಿಗೆ ಪ್ರತ್ಯೇಕ ಸಭೆಯನ್ನು ಕೂಡ ನಡೆಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...