alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ‘ಅನುಕೂಲಕ್ಕೊಂದು ಮೈತ್ರಿ’…?

ಮೈಸೂರು ಮಹಾನಗರ ಪಾಲಿಕೆ ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್-ಜೆಡಿಎಸ್ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದ್ದು, ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವಿದ್ದು, ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಭಾವಿಸಲಾಗಿತ್ತು. ಆದರೆ ಎರಡೂ ಪಕ್ಷಗಳು, ಪ್ರಥಮ ಅವಧಿಗೆ ಮೇಯರ್ ಗದ್ದುಗೆಯನ್ನು ತಮಗೇ ನೀಡಬೇಕೆಂದು ಪಟ್ಟು ಹಿಡಿದಿರುವುದು ಗೊಂದಲ ಮುಂದುವರೆಯಲು ಕಾರಣವಾಗಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಡಿಎಸ್ ನಾಯಕರು, ಕಾಂಗ್ರೆಸ್ ನವರು ಪ್ರಥಮ ಅವಧಿಗೆ ಮೇಯರ್ ಗಿರಿಯನ್ನು ನಮ್ಮ ಪಕ್ಷಕ್ಕೆ ಬಿಟ್ಟುಕೊಡಲಿ ಎಂದು ಹೇಳಿದರಲ್ಲದೆ ಬಿಜೆಪಿಯವರೂ ಸಹ ನಮ್ಮೊಂದಿಗೆ ಮಾತನಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಪ್ರಥಮ ಅವಧಿಗೆ ಕಾಂಗ್ರೆಸ್ ಮೇಯರ್ ಗಿರಿ ನೀಡಲು ಒಪ್ಪದಿದ್ದರೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...