alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ಬಾಣ

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದಿದ್ದಾರೆ.

ರಾಜ್ಯಪಾಲರಿಗೆ ಪ್ರಧಾನ ಮಂತ್ರಿ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಷಾ ಒತ್ತೆ ಹಾಕಿದ್ದರು. ಇವರೆಲ್ಲ ಡೋಂಗಿಗಳು. ಜನಾದೇಶವನ್ನು ಧಿಕ್ಕರಿಸುತ್ತಾರೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಾರೆಂದು ಸಿದ್ಧರಾಮಯ್ಯ ಖಂಡಿಸಿದ್ದಾರೆ. ವಿಶ್ವಾಸಮತ ಯಾಚನೆಯಲ್ಲಿ ವಿಫಲವಾಗ್ತೇನೆ ಎಂಬುದನ್ನು ಅರಿತ ಯಡಿಯೂರಪ್ಪ ಪಲಾಯನ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ನೀಡದೇ ಹೋಗಿದ್ದಲ್ಲಿ ನ್ಯಾಯ ಸಿಗುತ್ತಿರಲಿಲ್ಲ. ಯಡಿಯೂರಪ್ಪ 2008ರಂತೆ ಅನುಕಂಪ ಪಡೆಯಲು ಯತ್ನಿಸುತ್ತಿದ್ದಾರೆ. ಆದ್ರೆ ಇದು ಸಾಧ್ಯವಿಲ್ಲವೆಂದು ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಹುದ್ದೆಗೇರಲು ಆತುರವಿಲ್ಲ. ರಾಜ್ಯಪಾಲರ ಕರೆಗೆ ಕಾಯುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಉಸ್ತುವಾರಿ ಗುಲಾಂ ನಬಿ ಆಜಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ನಡೆಯನ್ನು ಖಂಡಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದಿದ್ದಾರೆ. ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್-ಜೆಡಿಎಸ್ ಗೆ ಬೆಂಬಲ ನೀಡಿದ ಶಾಸಕರಿಗೆ ಧನ್ಯವಾದ ಸಲ್ಲಿಸುವುದಾಗಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...