alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಡಾಯ ಶಾಸಕರಿಂದ ಇಂದು ರಾಜೀನಾಮೆ, ನಾಳೆ ಕಾಂಗ್ರೆಸ್ ಸೇರ್ಪಡೆ

ಜೆ.ಡಿ.ಎಸ್. ಪಕ್ಷದಿಂದ ದೂರವಾಗಿರುವ 6 ಮಂದಿ ಶಾಸಕರು ಇಂದು ಸ್ಪೀಕರ್ ಗೆ ರಾಜೀನಾಮೆ ನೀಡಲಿದ್ದು, ನಾಳೆ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಬಂಡಾಯ ಶಾಸಕರು ಜೆ.ಡಿ.ಎಸ್.ನಿಂದ ದೂರವಾಗಿ ಕಾಂಗ್ರೆಸ್ ಗೆ ಹತ್ತಿರವಾಗಿದ್ದಾರೆ. ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ವಿಪ್ ಉಲ್ಲಂಘಿಸಿ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಶಾಸಕರಾದ ಚೆಲುವರಾಯಸ್ವಾಮಿ, ಹೆಚ್.ಸಿ. ಬಾಲಕೃಷ್ಣ, ಜಮೀರ್ ಅಹ್ಮದ್, ಇಕ್ಬಾಲ್ ಅನ್ಸಾರಿ, ಭೀಮಾನಾಯ್ಕ, ಅಖಂಡ ಶ್ರೀನಿವಾಸಮೂರ್ತಿ ಅವರು ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಕಾರ್ಯಕ್ರಮದ ನಿಮಿತ್ತ ಸ್ಪೀಕರ್ ಕೆ.ಬಿ. ಕೋಳಿವಾಡ ಮೈಸೂರಿಗೆ ತೆರಳಿದ್ದು, ಅಲ್ಲಿಯೇ ರಾಜೀನಾಮೆ ನೀಡಲಿರುವ ಶಾಸಕರು, ಮಾರ್ಚ್ 25 ರಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...