alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಸೇರಲಿದ್ದಾರಾ ಕೆಲ ಬಿಜೆಪಿ ಶಾಸಕರು? ಕೆಪಿಸಿಸಿ ಕಾರ್ಯಾಧ್ಯಕ್ಷರು ಹೇಳಿದ್ದೇನು?

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ರಯತ್ನ ನಡೆಸುತ್ತಿರುವ ಮದ್ಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಬೀದರ್ ಗೆ ಭೇಟಿ ನೀಡಿದ ಈಶ್ವರ ಖಂಡ್ರೆ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಗೊಳ್ಳಲು ಬಿಜೆಪಿಯ ಕೆಲ ಶಾಸಕರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಯಾರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿ ನಾವುಗಳಿದ್ದು, ಈ ಕುರಿತು ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನದ ಕುರಿತು ಎದ್ದಿರುವ ಗೊಂದಲಗಳ ಕುರಿತು ಉತ್ತರಿಸಿದ ಈಶ್ವರ ಖಂಡ್ರೆ, ಈ ವಿಚಾರವನ್ನು ನಾವು ಬೆಂಬಲಿಸುವುದಿಲ್ಲ. ಜೊತೆಗೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...