alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಕಾಂಗ್ರೆಸ್ ನಾಯಕನ ಈ ವಿಡಿಯೋ

ಕಾಂಗ್ರೆಸ್ ನಾಯಕರೊಬ್ಬರು ಕರ್ತವ್ಯನಿರತ ಟ್ರಾಫಿಕ್ ಪೊಲೀಸರನ್ನು ಬಾಯಿಗೆ ಬಂದಂತೆ ನಿಂದಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜುಲೈ 4 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಾಂಗ್ರೆಸ್ ನಾಯಕ ಕೃಷ್ಣಮೂರ್ತಿ ಎಂಬವರು ತಮ್ಮ ಕಾರಿನಲ್ಲಿ ಕುಳಿತುಕೊಂಡೇ ಪೊಲೀಸರ ಜೊತೆ ವಾಗ್ವಾದ ನಡೆಸಿರುವ ದೃಶ್ಯ ಈ ವಿಡಿಯೋದಲ್ಲಿ ಸೆರೆಯಾಗಿದೆ.

ಯಾವ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲವಾದರೂ ಕೃಷ್ಣಮೂರ್ತಿ, ಪೊಲೀಸರಿಗೆ ‘ಹೋಗೋ ಆ ಕಡೆ ಈಡಿಯಟ್, ಮರ್ಯಾದೆ ಕೊಟ್ಟು ಮಾತಾಡಕ್ಕೆ ಆಗಲ್ವಾ ಲೋಫರ್. ಯಾರ ಹತ್ರ ಮಾತಾಡ್ತಿದ್ದೀನಿ ಅಂತ ಗೊತ್ತೇನೋ’ ಎಂದು ಗದರಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...