alex Certify
ಕನ್ನಡ ದುನಿಯಾ       Mobile App
       

Kannada Duniya

5 ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದ ವೇಣುಗೋಪಾಲ್ ವಿರುದ್ಧ ‘ಕೈ’ ನಾಯಕರು ಗರಂ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದು ವಾರಗಳೇ ಕಳೆದರೂ ಸಚಿವ ಸಂಪುಟ ರಚನೆಯಾಗಿಲ್ಲ. ಬುಧವಾರದಂದು ನೂತನ ಸಚಿವರು ಪ್ರಮಾಣ ಸ್ವೀಕರಿಸಲಿದ್ದು, ಇದರ ಮಧ್ಯೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಅಸಮಾಧಾನಗೊಂಡಿದ್ದಾರೆಂದು ಹೇಳಲಾಗಿದೆ.

ಖಾತೆ ಹಂಚಿಕೆ ಕುರಿತ ಮಾತುಕತೆ ಸಂದರ್ಭದಲ್ಲಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿಯವರು ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಲಿದ್ದಾರೆಂದು ಕೆ.ಸಿ. ವೇಣುಗೋಪಾಲ್ ಹೇಳಿರುವುದು ಈ ನಾಯಕರುಗಳ ಅಸಮಾಧಾನಕ್ಕೆ ಕಾರಣವೆನ್ನಲಾಗಿದೆ.

ಕೇವಲ 37 ಸೀಟುಗಳನ್ನು ಹೊಂದಿರುವ ಜೆಡಿಎಸ್ ಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವುದು ಹೇಗೆ ಎಂದು ಪ್ರಶ್ನಿಸುತ್ತಿರುವ ಈ ನಾಯಕರು, ಹಣಕಾಸು ಖಾತೆಯನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದಕ್ಕೂ ಅತೃಪ್ತಿಗೊಂಡಿದ್ದಾರೆನ್ನಲಾಗಿದೆ.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪರಿಸ್ಥಿತಿ ಬಹಳಷ್ಟು ಬದಲಾಗುವ ನಿರೀಕ್ಷೆ ಇದ್ದು, ಹೀಗಾಗಿ ವೇಣುಗೋಪಾಲ್ ಆತುರಾತುರವಾಗಿ ಜೆಡಿಎಸ್ ನ ಕುಮಾರಸ್ವಾಮಿ ಮುಂದಿನ 5 ವರ್ಷಗಳ ಕಾಲ ಮುಖ್ಯಮಂತ್ರಿಯೆಂದು ಹೇಳಬಾರದಾಗಿತ್ತೆಂಬುದು ಈ ನಾಯಕರುಗಳ ಅಭಿಪ್ರಾಯವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...