alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆ ಬಳಿಕ ಸ್ಪೋಟಗೊಂಡಿದ್ದ, ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶ, ಕಳೆದ ಮೂರ್ನಾಲ್ಕು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ ಸ್ಫೋಟಗೊಂಡಿದೆ.

ಇಂದು ನಡೆಯಲಿರುವ ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದ ಶಾಸಕ ತನ್ವೀರ್ ಸೇಠ್, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯು.ಟಿ. ಖಾದರ್ ಅಥವಾ ಜಮೀರ್ ಅಹಮದ್ ಖಾನ್ ಗೆ ನಮ್ಮ ಸಮುದಾಯವನ್ನು ಪ್ರತಿನಿಧಿಸುವ ಸಾಮರ್ಥ್ಯವಿಲ್ಲ. ಅರ್ಹರಲ್ಲದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರಲ್ಲದೆ, ಜಮೀರ್ ಅಹಮದ್ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಯತ್ನಿಸಿದ್ದರೆಂದು ಗಂಭೀರ ಆರೋಪ ಮಾಡಿದ್ದಾರೆ.

ಅತ್ತ ಹೈಕಮಾಂಡ್ ಭೇಟಿ ಬಳಿಕ ತಣ್ಣಗಾಗಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್, ಇದೀಗ ನಾಳೆ ಶಾಸಕರ ಸಭೆ ನಡೆಸಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಶಾಸಕ ಸುಧಾಕರ್, ಪಕ್ಷದ ಯುವ ನಾಯಕರಿಗೆ ಅವಕಾಶ ನೀಡದಿದ್ದಲ್ಲಿ ಸರ್ಕಾರಕ್ಕೆ ಅಪಾಯ ತಪ್ಪಿದ್ದಲ್ಲ ಎನ್ನುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...