alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಗೆ ಮೇಜರ್ ಸರ್ಜರಿ

congress

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಯ ಸ್ವರೂಪ ಬದಲಾಗತೊಡಗಿದೆ.

ತಡರಾತ್ರಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನಿವಾಸದಲ್ಲಿ ನಡೆದ ನಾಯಕರ ಸಭೆಯಲ್ಲಿ ಪಕ್ಷದ ಸಂಘಟನೆಯ ಕುರಿತಾಗಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಅದರಂತೆ ಎಲ್ಲಾ ಬೂತ್ ಕಮಿಟಿಗಳನ್ನು ಪುನರ್ ರಚಿಸಲಾಗುವುದು. ಕ್ರಿಯಾಶೀಲರಾಗಿ ಕೆಲಸ ಮಾಡದ 10 ಜಿಲ್ಲೆಗಳ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎನ್ನಲಾಗಿದೆ.

ಟಿಕೆಟ್ ಆಕಾಂಕ್ಷಿಗಳಿಗೆ, ಪಕ್ಷದ ಶಾಸಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡದೇ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗುವುದು. ರಾಜ್ಯ ಕಾಂಗ್ರೆಸ್ ಗೆ ನೇಮಕವಾದ ನಾಲ್ವರು ಸಹ ಉಸ್ತುವಾರಿಗಳನ್ನು 4 ಕಂದಾಯ ವಿಭಾಗಗಳಿಗೆ ನಿಯೋಜಿಸಲಾಗುವುದು ಎಂದು ಹೇಳಲಾಗಿದೆ.

ಆಗಸ್ಟ್ ಒಳಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಮಾವೇಶ ನಡೆಸಿ, ಸಂಘಟನೆಯನ್ನು ಬಲಪಡಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಲು ತೀರ್ಮಾನಿಸಲಾಗಿದೆ.

ಕೆ.ಸಿ. ವೇಣುಗೋಪಾಲ್, ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...