alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಕಮಾಂಡ್ ಅಂಗಳಕ್ಕೆ ಸಚಿವ ಸಂಪುಟ ರಚನೆಯ ಕಸರತ್ತು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳು ಕಳೆಯುತ್ತಾ ಬಂದರೂ ಸಚಿವ ಸಂಪುಟ ರಚನೆಯಾಗಿಲ್ಲ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ರಚನೆಯ ಕಸರತ್ತು ನಡೆಯುತ್ತಲೇ ಇದೆ.

ಹಣಕಾಸು, ಇಂಧನ, ಗೃಹ ಸೇರಿದಂತೆ ಕೆಲವು ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳ ನಾಯಕರು ಪಟ್ಟು ಹಿಡಿದಿದ್ದ ಕಾರಣ ಹಲವಾರು ಸುತ್ತಿನ ಮಾತುಕತೆ ಬಳಿಕ ಈ ಬಿಕ್ಕಟ್ಟು ಕೊನೆಗೊಂಡಿತ್ತು. ಇದೀಗ ಬುಧವಾರದಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗುತ್ತಿರುವ ಮಧ್ಯೆ, ಸಚಿವರಾಗಲು ಭಾರಿ ಪೈಪೋಟಿ ನಡೆದಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರನ್ನು ಚಿಂತೆಗೀಡುಮಾಡಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪದ್ಮನಾಭ ನಗರದ ನಿವಾಸದಲ್ಲಿ ಸಭೆ ನಡೆಸಿ ತಮ್ಮ ಪಕ್ಷದಿಂದ ಯಾರ್ಯಾರು ಸಚಿವರಾಗಬೇಕು ಎಂಬುದನ್ನು ಅಂತಿಮಗೊಳಿಸಿದ್ದಾರೆನ್ನಲಾಗಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ನೂತನ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿದ್ದರೂ ಅದಕ್ಕೆ ದೆಹಲಿ ನಾಯಕರ ಒಪ್ಪಿಗೆ ಬೇಕಿರುವ ಕಾರಣ ಈ ವಿಚಾರ ಈಗ ದೆಹಲಿಗೆ ಶಿಫ್ಟ್ ಆಗಿದೆ.

ವಿದೇಶ ಪ್ರವಾಸಕ್ಕೆ ತೆರಳಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮರಳಿ ಬರಲಿದ್ದು, ಅವರ ಭೇಟಿಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ನೂತನ ಸಚಿವರ ಪಟ್ಟಿಗೆ ರಾಹುಲ್ ಅನುಮೋದನೆ ನೀಡಿದ ನಂತರ ಬುಧವಾರದಂದು ಉಭಯಪಕ್ಷಗಳ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...