alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ ವೇಣುಗೋಪಾಲ್

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಬುಧವಾರದಂದು ಉಭಯ ಪಕ್ಷಗಳ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರದಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಚಿವ ಸಂಪುಟ ರಚನೆ ಕುರಿತಂತೆ ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರೂ ಉಪಸ್ಥಿತರಿದ್ದರೆನ್ನಲಾಗಿದೆ.

ಎರಡು ಹಂತಗಳಲ್ಲಿ ಸಂಪುಟಕ್ಕೆ ಸಚಿವರ ಸೇರ್ಪಡೆಯಾಗಲಿದ್ದು, ಯಾವ ಪಕ್ಷಕ್ಕೆ ಯಾವ ಖಾತೆ ಎಂಬುದು ಅಂತಿಮಗೊಂಡಿದೆ. ಅಲ್ಲದೆ ಮೊದಲ ಹಂತದಲ್ಲಿ ಯಾರು ಸಚಿವರಾಗಬೇಕೆಂಬುದೂ ತೀರ್ಮಾನವಾಗಿದೆ.

ಅಂತಿಮಗೊಂಡಿರುವ ಸಚಿವರ ಪಟ್ಟಿಯೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದೆಹಲಿಗೆ ತೆರಳಿದ್ದು, ವರಿಷ್ಠರಿಂದ ಅನುಮೋದನೆ ಪಡೆದ ಬಳಿಕ ಸೋಮವಾರ ಬೆಂಗಳೂರಿಗೆ ವಾಪಾಸ್ ಬರಲಿದ್ದಾರೆನ್ನಲಾಗಿದೆ. ದೆಹಲಿ ಭೇಟಿ ವೇಳೆ ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ನಿಗಮ ಮಂಡಳಿಗಳ ನೇಮಕಾತಿಗೂ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...