alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿ ಅಂಗಳ ತಲುಪಿದ ರಾಜ್ಯ ಕಾಂಗ್ರೆಸ್ ಒಳಜಗಳ

ಬೆಳಗಾವಿ ರಾಜಕಾರಣದಿಂದ ಆರಂಭವಾದ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಈಗ ದೆಹಲಿಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಕೈ ನಾಯಕರ ಅಸಮಾಧಾನವನ್ನು ತಣಿಸಲು ಹಾಗೂ ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮೊರೆ ಹೋಗಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ದೆಹಲಿಗೆ ತೆರಳಿದ್ದು, ಸಂಜೆ ಮಹತ್ವದ ಚರ್ಚೆ ನಡೆಯಲಿದೆ. ಇನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದ್ದು, ಅವರೂ ಕೂಡ ದೆಹಲಿಗೆ ತೆರಳಿದ್ದಾರೆ. ಈ ಮೂಲಕ ಜಾರಕಿಹೊಳಿ ಸಹೋದರರ ಅಸಮಾಧಾನಕ್ಕೂ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಾರೆ ರಾಜ್ಯ ನಾಯಕರ ದೆಹಲಿ ಭೇಟಿ ತೀವ್ರ ಕುತೂಹಲ ಕೆರಳಿಸಿದ್ದು, ಜಾರಕಿಹೊಳಿ ಸಹೋದರರ ಸಮಸ್ಯೆ ಪರಿಹಾರ, ಆಪರೇಷನ್ ಕಮಲದತ್ತ ವಾಲುವ ಶಾಸಕರಿಗೆ ಕಡಿವಾಣ, ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ ಮೊದಲಾದ ವಿಚಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿರುವುದು ಮಹತ್ವದ್ದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...