alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಿಂದ ಶಾಸಕ ನಡಹಳ್ಳಿ ಉಚ್ಚಾಟನೆ

ಬೆಂಗಳೂರು: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್, ನಡಹಳ್ಳಿಯವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಶಾಸಕ ನಡಹಳ್ಳಿ ಹೇಳಿಕೆ ನೀಡಿದ್ದರು. ಅಲ್ಲದೇ, ಆಡಳಿತ ಪಕ್ಷದ ಶಾಸಕರಾಗಿಯೂ ಸರ್ಕಾರ ಮತ್ತು ಪಕ್ಷವನ್ನು ಟೀಕಿಸಿದ್ದರು. ಅವರಿಗೆ ನೋಟಿಸ್ ನೀಡಿ ಅಮಾನತು ಮಾಡಲಾಗಿತ್ತು.

ನೋಟಿಸ್ ಗೆ ಅವರು ಸಮರ್ಪಕ ಉತ್ತರ ನೀಡದ ಕಾರಣ, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸಲಾಗಿದೆ.

2015 ರ ಏಪ್ರಿಲ್ 23 ರಂದು ನಡಹಳ್ಳಿಯವರಿಗೆ ನೋಟಿಸ್ ನೀಡಲಾಗಿದ್ದು, ಸಮರ್ಪಕ ಉತ್ತರ ನೀಡಿರಲಿಲ್ಲ. ಶಿಸ್ತು ಸಮಿತಿ ಈ ಕುರಿತು ಕೆ.ಪಿ.ಸಿ.ಸಿ.ಗೆ ಶಿಫಾರಸು ಮಾಡಿದ್ದು, ಅದರಂತೆ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಕೈಬಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...