alex Certify
ಕನ್ನಡ ದುನಿಯಾ       Mobile App
       

Kannada Duniya

ಏಕಾಏಕಿ ನಾಪತ್ತೆಯಾದ ಕಾಂಗ್ರೆಸ್ ಶಾಸಕ…?

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಾಳೆ ಬಹುಮತ ಸಾಬೀತುಪಡಿಸಲಿರುವ ಅನಿವಾರ್ಯತೆಯಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಬೆಳಿಗ್ಗೆ 11 ಗಂಟೆಗೆ ವಿಧಾನಸಭಾ ಅಧಿವೇಶನವನ್ನು ಕರೆದಿದೆ.

ಈ ಹಿನ್ನಲೆಯಲ್ಲಿ ‘ಆಪರೇಷನ್ ಕಮಲ’ ದಿಂದ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹೈದರಾಬಾದಿನ ಕೃಷ್ಣಾ ತಾಜ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳು ಇಂದು ರಾತ್ರಿಯೇ ಮರಳಿ ಬರುತ್ತಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ನೇರವಾಗಿ ಬೆಳಿಗ್ಗೆ ವಿಧಾನಸೌಧಕ್ಕೆ ಆಗಮಿಸುತ್ತಿದ್ದರೆನ್ನಲಾಗಿದೆ.

ನಾಳಿನ ವಿಶ್ವಾಸಮತ ಯಾಚನೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರಿಗೆ, ಕಲಾಪದಲ್ಲಿ ತೆಗೆದುಕೊಳ್ಳಬೇಕಾದ ನಿರ್ಧಾರದ ಕುರಿತು ಮಾಹಿತಿ ನೀಡುವ ಸಲುವಾಗಿ ವಿಶೇಷ ವಿಮಾನದಲ್ಲಿ ಹೈದರಾಬಾದಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆತುರದ ನಿರ್ಧಾರ ಕೈಗೊಳ್ಳದಂತೆ ಸ್ವಪಕ್ಷೀಯ ಶಾಸಕರಿಗೆ ತಿಳಿ ಹೇಳಿದ್ದಾರೆನ್ನಲಾಗಿದೆ. ಅಲ್ಲದೇ ಯಾವುದೇ ಆಮಿಷಕ್ಕೆ ಒಳಗಾಗದೆ ಪಕ್ಷ ತೆಗೆದುಕೊಂಡ ತೀರ್ಮಾನಕ್ಕೆ ಬದ್ದರಾಗಿರುವಂತೆ ತಿಳಿಸಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ಇದಾದ ಸ್ವಲ್ಪ ಹೊತ್ತಿನಲ್ಲೇ ಕಾಂಗ್ರೆಸ್ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆನ್ನಲಾಗಿದ್ದು, ಇದು ಕಾಂಗ್ರೆಸ್ ನಾಯಕರಿಗೆ ಆಘಾತ ನೀಡಿದೆ. ಕೃಷ್ಣಾ ತಾಜ್ ಹೋಟೆಲ್ ಗೆ ಬಂದಿದ್ದ ಅಪರಿಚಿತನೊಬ್ಬನ ಜೊತೆ ಈ ಶಾಸಕರು ತೆರಳಿದ್ದಾರೆನ್ನಲಾಗಿದ್ದು, ಆ ಶಾಸಕ ಯಾರೆಂಬ ಮಾಹಿತಿ ಹೊರ ಬಿದ್ದಿಲ್ಲವಾದರೂ ಈ ವದಂತಿ ನಿಜವೇ ಎಂಬುದು ನಾಳಿನ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಬಹಿರಂಗವಾಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...