alex Certify
ಕನ್ನಡ ದುನಿಯಾ       Mobile App
       

Kannada Duniya

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಬಿಜೆಪಿ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ರಚನೆ ಕೊನೆಗೂ ನೆರವೇರಿದೆ. ಬುಧವಾರದಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ ಮೈತ್ರಿಕೂಟ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮಧ್ಯೆ ಉಭಯ ಪಕ್ಷಗಳಲ್ಲೂ ಸಚಿವ ಸ್ಥಾನಾಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕಾಂಗ್ರೆಸ್ ಅತೃಪ್ತರು ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ನಡೆ ಕುರಿತು ಚರ್ಚೆ ನಡೆಸಿದ್ದಾರೆ.

ಜೆಡಿಎಸ್ ನಲ್ಲೂ ಸಚಿವ ಸ್ಥಾನ ವಂಚಿತ ಶಾಸಕರೊಬ್ಬರು, ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ನಾಯಕರು, ಕಾದು ನೋಡುವ ತಂತ್ರ ಅನುಸರಿಸಲು ತೀರ್ಮಾನಿಸಿದ್ದಾರೆಂದು ಹೇಳಲಾಗಿದೆ.

ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರನ್ನು ಸೆಳೆಯುವ ಕಾರ್ಯ ಸದ್ಯಕ್ಕೆ ಮಾಡದಿರಲು ನಿರ್ಧರಿಸಲಾಗಿದ್ದು, ಈ ಶಾಸಕರುಗಳು ಮುಂದೇನು ನಡೆ ಅನುಸರಿಸುತ್ತಾರೆ ಎಂಬುದನ್ನು ಕಾದು ನೋಡಲು ಬಿಜೆಪಿ ನಾಯಕರು ಚಿಂತಿಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...