alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಶಾಸಕರಿಗೆ ಜೆ.ಡಿ.ಎಸ್.ಗಾಳ

cong

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ, ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 10 ಶಾಸಕರಿಗೆ ಜೆ.ಡಿ.ಎಸ್ ಗಾಳ ಹಾಕಿದೆ ಎಂದು ಹೇಳಲಾಗಿದೆ.

ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆ.ಡಿ.ಎಸ್. ನಾಯಕರು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಇನ್ನಿಲ್ಲದ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ಪಕ್ಷದ 10 ಮಂದಿ ಶಾಸಕರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಈ 10 ಮಂದಿ ಶಾಸಕರಿಗೆ ಜೆ.ಡಿ.ಎಸ್. ವತಿಯಿಂದ ಹಣದ ಆಮಿಷ ಒಡ್ಡಲಾಗಿದೆ ಎಂದು ರಾಜ್ಯ ಗುಪ್ತಚರ ಇಲಾಖೆಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವರದಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಗುಪ್ತಚರ ಇಲಾಖೆಯ ವರದಿಯಲ್ಲಿ ಹೆಸರಿಸಿರುವ ಶಾಸಕರು, ಈ ಆರೋಪವನ್ನು ತಳ್ಳಿಹಾಕಿದ್ದು, ಜೆ.ಡಿ.ಎಸ್. ವತಿಯಿಂದ ಯಾರೂ ತಮ್ಮನ್ನು ಸಂಪರ್ಕಿಸಿಲ್ಲ. ನಾವು ಪಕ್ಷದ್ರೋಹ ಮಾಡುವುದಿಲ್ಲ. ಗುಪ್ತಚರ ವರದಿಯ ಬಗ್ಗೆ ತಮಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...