alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಹೊಸ್ತಿಲಲ್ಲೇ ಮುಳಬಾಗಿಲು ಶಾಸಕರಿಗೆ ಬಿಗ್ ಶಾಕ್

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಇದೇ ಹೊತ್ತಿನಲ್ಲಿ ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತನೂರು ಮಂಜುನಾಥ್ ರಿಗೆ ಹೈಕೋರ್ಟ್ ತೀರ್ಪು ಶಾಕ್ ನೀಡಿದೆ. ಅಲ್ಲದೇ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಿರುವ ಮಂಜುನಾಥ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಭೀತಿ ಎದುರಾಗಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾವು ಬುಡಗ ಜಂಗಮ ಜಾತಿಗೆ ಸೇರಿದ್ದೇನೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಪಕ್ಷೇತರರರಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಕೊತ್ತನೂರು ಮಂಜುನಾಥ್ ರ ಜಾತಿ ಪ್ರಮಾಣಪತ್ರವನ್ನು ನ್ಯಾಯಾಲಯ ರದ್ದು ಮಾಡಿದೆ.

ಮುಳಬಾಗಿಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಕ್ಷೇತ್ರವಾಗಿದ್ದು, ಕೊತ್ತನೂರು ಮಂಜುನಾಥ್ ಬುಡಗ ಜಂಗಮ ಜಾತಿಗೆ ಸೇರಿಲ್ಲವಾದರೂ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಬಳಿಕ ಜಾತಿ ಪ್ರಮಾಣ ಪತ್ರ ರದ್ದು ಮಾಡಲಾಗಿದ್ದು, ಈಗ ಹೈಕೋರ್ಟ್ ಇದನ್ನು ಎತ್ತಿ ಹಿಡಿದಿರುವ ಕಾರಣ ಕೊತ್ತನೂರು ಮಂಜುನಾಥ್ ಚುನಾವಣೆ ಹೊಸ್ತಿಲಲ್ಲೇ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಂಜುನಾಥ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...